ಕಾಪು: ಭೀಕರ ಅಪಘಾತ- ಟೆಂಪೋ ಪಲ್ಟಿಯಾಗಿ ಇಬ್ಬರು ಸಾವು- ನಾಲ್ವರು ಗಂಭೀರ



ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಮಿಕರಿದ್ದ ಟೆಂಪೋ ಪಲ್ಟಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ.ಟೆಂಪೋದಲ್ಲಿ ಒಟ್ಟು ಆರು ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದು , ಈ ಪೈಕಿ ಉತ್ತರ ಪ್ರದೇಶ ಮೂಲದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ.ಉಳಿದವರೆಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.



ಈವೆಂಟ್ ಒಂದಕ್ಕೆ ಸಾಮಗ್ರಿಗಳನ್ನು ತುಂಬಿಕೊಂಡಿದ್ದ ಟೆಂಪೋ ಕಾಪುವಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಇದರಿಂದ ಒಳಗಿದ್ದವರು ಗಂಭೀರ ಗಾಯಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ.ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.