![]() |
| ಪೂರ್ವಭಾವಿ ಸಭೆ |
ಉಡುಪಿ: ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ "ಲಕ್ಷ ಕಂಠ ಗೀತಾ ಪಾರಾಯಣ - ಬ್ರಹತ್ ಗೀತೋತ್ಸವ" ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈಗಾಗಲೇ ಎಸ್ ಪಿಜಿ ತಂಡ ಉಡುಪಿಗೆ ಭೇಟಿ ನೀಡಿದ್ದು ಮಂಗಳವಾರ ಸ್ಥಳ ಪರಿಶೀಲನೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಭೇಟಿಯ ಸಂದರ್ಭದ ಪ್ರಧಾನಿಯವರ ಕಾರ್ಯಕ್ರಮ , ವೇದಿಕೆ ,ಭದ್ರತೆ ಮತ್ತು ಸಿದ್ಧತೆಗಳ ಬಗ್ಗೆ ಸಮಾಲೋಚನೆ ನಡೆಯಿತು.ಮಂಗಳವಾರ ಎಸ್ ಪಿಜಿ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅಂತಿಮ ರೂಪುರೇಷೆ ಸಿದ್ದಗೊಳ್ಳುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗಡ್ಯಾಲ್ , ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
