ಉಡುಪಿ: ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನನಗೆ ಗೌರವದ ವಿಷಯ - ಎಕ್ಸ್ ನಲ್ಲಿ ಪ್ರಧಾನಿ ಮೋದಿ ಪೋಸ್ಟ್

ಪ್ರಧಾನಿ ಪೋಸ್ಟ್


ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ನ.28ರಂದು (ಶುಕ್ರವಾರ)  ಭೇಟಿ ನೀಡಲಿದ್ದು ಈ ಬಗ್ಗೆ ಅವರು ತಮ್ಮ   ಎಕ್ಸ್ ಖಾತೆಯಲ್ಲಿ ಕನ್ನಡದಲ್ಲಿ ಪೋಸ್ಟ್ ಹಾಕಿರುವುದು ವಿಶೇಷವಾಗಿದೆ.

ಕನ್ನಡದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, "ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ.ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ " ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.