![]() |
| ಆಸ್ಟ್ರೋ-ರಾಜೇಶ್-ಬಾಪೂ |
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಸ್ಥಾನಕ್ಕೆ ನ.9ರಂದು ( ಇಂದು ಭಾನುವಾರ) ಚುನಾವಣೆ ನಡೆಯಲಿದ್ದು, ಬೆಳಗ್ಗೆ 9ರಿಂದ ಅಪರಾಹ್ನ 3 ಗಂಟೆಯವರೆಗೆ ಉಡುಪಿ ಪತ್ರಿಕಾ ಭವನದಲ್ಲಿ ಮತದಾನ ನಡೆಯಲಿದೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ , ಪ್ರಧಾನ ಕಾರ್ಯದರ್ಶಿ , ಕೋಶಾಧಿಕಾರಿ ಸಹಿತ ಬಹುತೇಕ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು , ರಾಜ್ಯ ಸಮಿತಿ ಸದಸ್ಯ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯುತ್ತಿದೆ.ರಾಜ್ಯ ಸಮಿತಿ ಸದಸ್ಯ ಸ್ಥಾನಕ್ಕೆ ಹಿರಿಯ ಪತ್ರಕರ್ತರಾದ ಆಸ್ಟ್ರೋ ಮೋಹನ್ , ರಾಜೇಶ್ ಶೆಟ್ಟಿ , ಬಾಲಕೃಷ್ಣ ಪೂಜಾರಿ ಚುನಾವಣೆಗೆ ನಿಂತಿದ್ದು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಆದುದರಿಂದ ಮತದಾರರ ಪಟ್ಟಿಯಲ್ಲಿರುವ ಸಂಘದ ಸದಸ್ಯರು ಕಡ್ಡಾಯವಾಗಿ ಈ ಮತದಾನದಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತದಾನದಿಂದ ಯಾರೂ ದೂರ ಉಳಿಯದೇ ಶೇ.100 ರಷ್ಟು ಮತದಾನ ಆಗುವಂತೆ ಎಲ್ಲರೂ ಸಹಕರಿಸಿ ರಾಜ್ಯಕ್ಕೆ ಮಾದರಿಯಾಗಬೇಕು.ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತಿಳಿಸಿದೆ.
