ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೊರೆಂಟ್ ನಲ್ಲಿ ಸಿಲಿಂಡರ್ ಸ್ಪೋಟ- ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ




ಮಣಿಪಾಲ: ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೊರೆಂಟ್ ನಲ್ಲಿ ಬೆಂಕಿ  ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು‌ ಬೆಂಕಿಗಾಹುತಿಯಾಗಿವೆ.

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು  ರೆಸ್ಟೋರೆಂಟ್ ಸಂಪೂರ್ಣ ಸುಟ್ಟುಹೋಗಿದೆ .ಮಣಿಪಾಲದ ಆರ್ ಎಸ್ ಬಿ ಸಭಾಭವನದ ಬಳಿಯ ನಗರಸಭೆ ಕಟ್ಟಡದಲ್ಲಿ ಈ ರೆಸ್ಟೋರೆಂಟ್ ಇದೆ.ಸದ್ಯ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.