ಮಂಗಳೂರು: ಯುವಕನ ಮೇಲೆ ತಂಡದಿಂದ ತಲವಾರು ದಾಳಿ

ತಂಡದಿಂದ ತಲವಾರು ದಾಳಿ

ಮಂಗಳೂರು: ಮಂಗಳೂರಿನ ಎಡಪದವು ಎಂಬಲ್ಲಿ ಯುವಕನೋರ್ವನಿಗೆ 4 ಮಂದಿ ದುಷ್ಕರ್ಮಿಗಳ ತಂಡ ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್‌ ತಲವಾರು ದಾಳಿಗೆ ಒಳಗಾದವರು. ಇವರ ಬಲಕೈಗೆ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದು ಬಂದಿದೆ.

ಅಖಿಲೇಶ್‌ ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ಮಾಡಿದೆ.

ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಜಮಾವಣೆಗೊಂಡ ಜನರು, ಅಖಿಲೇಶ್‌ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.