ಉಡುಪಿ: ಕೃಷ್ಣಮಠಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಡಿಸಿ ,ಎಸ್ಪಿ ,ಜನಪ್ರತಿನಿಧಿಗಳ ಪೂರ್ವಭಾವಿ ಸಭೆ




ಉಡುಪಿ: ಉಡುಪಿ  ಶ್ರೀಕೃಷ್ಣಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷಕಂಠ ಗೀತಾ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣಮಠ ಸಮೀಪದ ಗೀತಾ ಮಂದಿರದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೋಲೀಸ್ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನೊಳಗೊಂಡ ಪೂರ್ವಭಾವಿ ಸಭೆ ನಡೆಯಿತು.  



ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಉಡುಪಿಗೆ ಪ್ರಧಾನಮಂತ್ರಿಗಳ ಭೇಟಿಯೊಂದಿಗೆ ಉಡುಪಿಯ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಬಲ ಸಿಕ್ಕಂತಾಗುವುದು.ಇದಕ್ಕಾಗಿ ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಸಹಕರಿಸಬೇಕೆಂದು ಕೋರಿದರು.

ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಬೆಳಪು ದೇವಿ ಪ್ರಸಾದ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ  ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಸಹಕರಿಸುವ ಭರವಸೆ ನೀಡಿದರು.ಜಿಲ್ಲಾ ಪೋಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕಂದಾಯ ಉಪ ಆಯುಕ್ತೆ  ರಶ್ಮಿ, ತಹಶೀಲ್ದಾರ್ ಗುರುರಾಜ್ ಮೊದಲಾದವರು ಭಾಗವಹಿಸಿದ್ದರು.