![]() |
| ಎಚ್ ವೈ ಮೇಟಿ |
ಬೆಂಗಳೂರು: ಮಾಜಿ ಸಚಿವ ಎಚ್.ವೈ ಮೇಟಿ ನಿಧನ ಹೊಂದಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಎಚ್.ವೈ.ಮೇಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.ಎಚ್.ವೈ. ಮೇಟಿ ( ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.
ಈ ಹಿಂದೆ 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
