![]() |
| ದಾಮೋದರ ಗೌಡ |
ಉಡುಪಿ: ಪರ್ಕಳ ಪೇಟೆ ಬಳಿ ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ವಾಹನದಲ್ಲಿ ಸಾಗಿಸಿದ್ದು, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರವುದನ್ನು ದೃಢಪಡಿಸಿದರು. ಮೃತರ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಅದರಲ್ಲಿ ಹೆಸರು ದಾಮೋದರ ಗೌಡ (50) ಸಂತಟ್ಟು ಹೌಸ್, ಬಡಗಾಯಿಪದವು, ಮಂಗಳೂರು ಎನ್ನುವ ವಿಳಾಸ ಇದೆ.
ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ, ಅಥವಾ ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
