![]() |
| ಸಂತೋಷ್ ಮೊಗವೀರ |
ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.
ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.
ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಘಟನಾಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಟಿ ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಭಗೌಡ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರದೀಪ್, ಮತ್ತು ಅಶೋಕ್ ರವರು ಬಂದು ಪರಿಶೀಲಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
