ಉಡುಪಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ



ಉಡುಪಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ 2026 ಜನವರಿ 1 ರಿಂದ ಮಾರ್ಚ್ 31 ರವರೆಗೆ 90 ದಿನಗಳ "ವಿಶೇಷ ಮಧ್ಯಸ್ಥಿಕೆ ಅಭಿಯಾನ" ನಡೆಸಲಿದೆ. 

ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳಲ್ಲಿ ರಾಜಿ ಸಂಧಾನವನ್ನು  ನಡೆಸಲು ಅವಕಾಶವನ್ನು ಒದಗಿಸಿದೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಅಗತ್ಯ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕುಂದಾಪುರ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಕಳವನ್ನು ಸಂಪರ್ಕಿಸಿ ಎಂದು ಕಾನೂನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.