ಉಡುಪಿ: ಧಾರ್ಮಿಕ ಸಾಮಾಜಿಕ ಮುಂದಾಳು ಗುಂಡು ಶೆಟ್ಟಿ ಕಪ್ಪೆಟ್ಟು ನಿಧನ

ಗುಂಡು ಶೆಟ್ಟಿ

ಉಡುಪಿ: ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು.

ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪೆಟ್ಟು ಇದರ ಶೆಟ್ಟಿ ಬಾಲೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಗುಂಡು ಶೆಟ್ಟಿ ಕಪ್ಪೆಟ್ಟು ಅವರು ತನ್ನ ನೇರ ನಡೆ-ನುಡಿಗಳಿಂದ ಜನಾನುರಾಗಿಯಾಗಿದ್ದರು, ದೈವಾರಾಧನೆ ಸಹಿತ ದೈವಸ್ಥಾನಗಳ ಧಾರ್ಮಿಕ ಆಚರಣೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರ ಸಹಿತ ಬಂಧು ವರ್ಗ ಮತ್ತು ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.