ಬೈಂದೂರು: ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್



ಬೈಂದೂರು: ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅವರು ಶ್ರೀ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಕ್ಷೇತ್ರಕ್ಕೆ ಬಂದ ರಾಜ್ಯಪಾಲರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಕ್ಷೇತ್ರದ ಹಿರಿಯ ಅರ್ಚಕರಾದ ಎನ್.ನರಸಿಂಹ ಅಡಿಗ, ಶ್ರೀಧರ ಅಡಿಗ, ಕೆ.ಎನ್.ಗೋವಿಂದ ಅಡಿಗ, ರಾಮಚಂದ್ರ ಅಡಿಗ, ಎನ್.ಸುಬ್ರಮಣ್ಯ ಅಡಿಗ ಮುಂತಾದವರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಅವರು  ರಾಜ್ಯಪಾಲ ಗೆಹ್ಲೋತ್ ಅವರನ್ನು ಗೌರವಿಸಿದರು. ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಯು.ರಾಜೇಶ್ ಕಾರಂತ್, ಆಲೂರು ರಘುರಾಮ ದೇವಾಡಿಗ, ಸುರೇಂದ್ರ ಶೆಟ್ಟಿ, ಧನಾಕ್ಷೀ ವಿಶ್ವನಾಥ್ ಪೂಜಾರಿ, ಸುಧಾ ಕೆ, ಮಹಾಲಿಂಗ ನಾಯ್ಕ್, ಉದ್ಯಮಿ ಶರತ್‌ಕುಮಾರ ಶೆಟ್ಟಿ ಉಪ್ಪುಂದ ಇದ್ದರು.

ದೇವಸ್ಥಾನದ ಅತಿಥಿ ಗ್ರಹದಲ್ಲಿ ಪ್ರಸಾದ ಸ್ವೀಕರಿಸಿದ ರಾಜ್ಯಪಾಲರು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.