ಪಾಕಿಸ್ಥಾನಕ್ಕೆ ಜೈಕಾರ ಹಾಕುವವರನ್ನು ಬೆಂಬಲಿಸುವ ಕಾಂಗ್ರೆಸ್ ಪುಡಾರಿಗಳಿಂದ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

ಗಜೇಂದ್ರ ಎಸ್ ಬೇಲೆಮನೆ

ಬೈಂದೂರು: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಆರಂಭ ಮಾಡಿ,ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪೇಜಾವರ ವಿಶ್ವಪ್ರಸನ್ನರ ಮಾರ್ಗದರ್ಶನದಲ್ಲಿ ಗೋವಿಗಾಗಿ ಮೇವು ಸಂಘಟನೆ ಮೂಲಕ ರಾಜ್ಯದ ಮನೆಮಾತದವರು. ಯುವಮೋರ್ಚಾ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಪಾದರಸದಂತೆ ಸದಾ ಕಾಂಗ್ರೆಸ್ ಪಕ್ಷದ ವಿರುದ್ದ ಗುಡುಗುವ ಇವರನ್ನು ಹತ್ತಿಕ್ಕಲು ಅಪಪ್ರಚಾರಕ್ಕೆ ಮುಂದಾಗಿರುವ ಕಾಂಗ್ರೇಸ್  ಬಾರ್ಕೂರಿನಲ್ಲಿ ಇವರ ಮಾಲಕತ್ವದ ಸಂಕಮ್ಮ ತಾಯಿ ರೆಸಾರ್ಟ್ ನಲ್ಲಿ ನೇಪಾಳ ಮೂಲದ ಪ್ರಜೆಗಳು ಕೆಲಸದಲ್ಲಿರುವುದನ್ನೇ ದೊಡ್ಡ ದೇಶದ್ರೋಹ ಎನ್ನುವ ರೀತಿ ಬಿಂಬಿಸಿ ಅವರ ತೇಜೋವಧೆ ಮಾಡುತ್ತೇವೆ ಎನ್ನುವ ಭ್ರಮೆಯಲ್ಲಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.