ಶಿರ್ವ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ: ಅಂತರ್ ಜಿಲ್ಲಾ ಕಳ್ಳನ ಬಂಧನ


ಉಡುಪಿ: ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ.

ಡಿ.5ರಂದು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಆರಂಭಿಸಿದ್ದರು.

ಶಿರ್ವ ಪೊಲೀಸರಿಂದ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಸಂಚರಿಸಿ ಆರೋಪಿ ಓಂ ಕೋಲಾರ ಎಂಬಾತನನ್ನು ಬಂಧಿಸಿದೆ.

ಬಂಧಿತ ಆರೋಪಿಯಿಂದ ಶಿರ್ವ ಪೊಲೀಸ್ ಠಾಣೆಗೆ ಸಂಬಂಧಿಸಿದ ಒಂದು ದ್ವಿಚಕ್ರ ವಾಹನ ಹಾಗೂ ಇತರೆ ಕಾಪು, ಬೆಂಗಳೂರು ನಗರದಲ್ಲಿನ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಒಟ್ಟು ಐದು ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.