![]() |
| ಯಡಿಯೂರಪ್ಪ |
ಉಡುಪಿ: ಪೋಕೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿ.ಎಂ ಬಿ. ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿರುವ ಸುಪ್ರೀಂಕೋರ್ಟ್, ಪ್ರತಿವಾದಿಗಳಾದ ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್‌ಮಾಲ್ಯ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದೆ.
ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನವೆಂಬರ್ 13ರಂದು ನಿರಾಕರಿಸಿತ್ತು. ಹೈಕೋರ್ಟ್‌ನ ಈ ಆದೇಶದ ಬೆನ್ನಲ್ಲೇ ಬಿ. ಎಸ್. ಯಡಿಯೂರಪ್ಪ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥಾ ಮತ್ತು ಸಿದ್ಧಾರ್ಥ್ ದಾವೆ ವಾದ ಮಂಡಿಸಿದರು. ಹೈಕೋರ್ಟ್‌ನ ಹಿಂದಿನ ಸುತ್ತಿನ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಪ್ರತಿಪಾದಿಸಿದರು. ಯಡಿಯೂರಪ್ಪ ಅರ್ಜಿಯನ್ನು ಹೈಕೋರ್ಟ್ ಅರ್ಹತೆಯ ಆಧಾರದಲ್ಲಿ ಪರಿಗಣಿಸಿಲ್ಲ ಎಂದು ವಕೀಲರು ಪೀಠಕ್ಕೆ ತಿಳಿಸಿದರು. ಅಲ್ಲದೆ,ಯಡಿಯೂರಪ್ಪ 88 ವರ್ಷದ ಹಿರಿಯ ವ್ಯಕ್ತಿ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜಕೀಯ ದ್ವೇಷದಿಂದ ಈ ಪ್ರಕರಣದಲ್ಲಿ ನರಳುತ್ತಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.
