![]() |
| ಸಿಎಂಗೆ ವರದಿ ಹಸ್ತಾಂತರ |
ಬೆಂಗಳೂರು: ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.
ಕೋವಿಡ್ ಸಾಂಕ್ರಾಮಿಕವು ರಾಜ್ಯವನ್ನು ಕಾಡಿದಾಗ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ನೀಡಿತ್ತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೋವಿಡ್ ಅಕ್ರಮದ ತನಿಖೆಗೆ ಆಯೋಗವನ್ನು ರಚಿಸಲಾಗಿತ್ತು.
