ಬ್ರಹ್ಮಾವರ: : ಟ್ರಕ್ ನ ಚಕ್ರದಡಿ ಸಿಲುಕಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ಸವಾರ ಬ್ರಹ್ಮವಾರ ಮಟಪಾಡಿಯ ನಿವಾಸಿ ಅಭಿಷೇಕ್ ( 25) ಎಂದು ತಿಳಿದುಬಂದಿದೆ. ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದೆ. ಘಟನಾ ಸ್ಥಳದಲ್ಲಿದ್ದು ಬ್ರಹ್ಮಾವರ ಆರಕ್ಷಕ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು. ಶವತೆರವು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು, ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾದರು.
