ಉಡುಪಿ: ಕಲ್ಸಂಕ ಬಳಿ ಭೀಕರ ಅಪಘಾತ: ಕಂಟೈನರ್ ಲಾರಿಯ ಚಕ್ರದಡಿಗೆ ಸಿಲುಕಿ ಯುವಕ ಸಾವು



ಉಡುಪಿ: ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆಗೆ ಬಿದ್ದಿದೆ. ಇದರ ಪರಿಣಾಮ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.