ಬ್ರಹ್ಮಾವರ: ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ- 17 ಬೋಟ್ ಗಳು ಪೊಲೀಸ್ ವಶಕ್ಕೆ



ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಪ್ರಕರಣದ ತನಿಖೆ ನಡೆಯುತ್ತಿದ್ದು ನದಿಗಳಲ್ಲಿ ಬೋಟ್ ಗಳನ್ನು ಉಪಯೋಗಿಸಿ ಮರಳುಗಾರಿಕೆ ನಡೆಸಿರುವ ಬಗ್ಗೆ ಮಾಹಿತಿ ಲಭಿಸಿದೆ.ಈ ಮಾಹಿತಿ ಆಧಾರದಲ್ಲಿ ಪೊಲೀಸರು  ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿದ್ದ ಅಕ್ರಮ ಮರಳುಗಾರಿಕೆಗೆ ಉಪಯೋಗಿಸಿದ 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. 

ಈ ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ,  ಸುದರ್ಶನ್ ದೊಡಮನಿ  ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸಿದ್ದು ತನಿಖೆ ಮುಂದುವರೆದಿದೆ.