ಉಡುಪಿ:ಶಿಕ್ಷಣ ತಜ್ಞ ಅಶೋಕ್ ಕಾಮತ್ ಅವರಿಗೆ "ವಿಶ್ವಪ್ರಭಾ ಪುರಸ್ಕಾರ 2026"



ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಶ್ರೀಮತಿ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ 'ವಿಶ್ವಪ್ರಭಾ ಪುರಸ್ಕಾರ - 2026 'ವನ್ನು ಶಿಕ್ಷಣ ತಜ್ಞ ಅಶೋಕ ಕಾಮತ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.

ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ  ಗೌರವ ಧನ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.ಇದೇ ಬರುವ ಜನವರಿ ತಿಂಗಳ 26ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ 'ಸಂಸ್ಕೃತಿ ಉತ್ಸವ' ದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು  ಸಂಸ್ಥೆಯ ಸಂಚಾಲಕ ರವಿರಾಜ್ ಎಚ್. ಪಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಸಂಸ್ಥೆಯ ಮಹಾಪೋಷಕರಾದ ಡಾ. ಹರೀಶ್ಚಂದ್ರ, ಉಪಾಧ್ಯಕ್ಷೆ ಸಂಧ್ಯಾ ಶೆಣೈ, ಗೌರವ ಸಲಹೆಗಾರರಾದ ಜನಾರ್ದನ್ ಕೊಡವವೂರ್ ಉಪಸ್ಥಿತರಿದ್ದರು.