ಉಡುಪಿ: ಸ್ಟಾಕ್ ಮಾರ್ಕೆಟ್ ನಲ್ಲಿ ಲಾಭಾಂಶದ ಆಮಿಷ- ನಿವೃತ್ತ ಎಂಐಟಿ ಉದ್ಯೋಗಿಗೆ 30 ಲಕ್ಷ ರೂ. ವಂಚನೆ !



ಉಡುಪಿ: ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಗಳಿಸಬಹುದು ಎಂದು ನಿವೃತ್ತ ಎಂಐಟಿ ಉದ್ಯೋಗಿಗೆ ಲಕ್ಷಾಂತರ ರೂ.ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಎಂಐಟಿ ನಿವೃತ್ತ ಉದ್ಯೋಗಿ ಉಮಾನಂದ ಕೆ.ವಿ. ಹಣ ವಂಚನೆಗೆ ಒಳಗಾದವರು.

ವಾಟ್ಸಾಪ್ ನಲ್ಲಿ ವಂಚಕನೊಬ್ಬ ಇವರನ್ನು ಸಂಪರ್ಕಿಸಿ ಆಮಿಷವೊಡ್ಡಿದ್ದಾನೆ. ವಂಚಕರ ಮಾತು ನಂಬಿದ ಅವರು ನ. 6 ರಿಂದ ಡಿ. 31 ರ ವರೆಗೆ ಸ್ಟಾಕ್ ಮಾರ್ಕೇಟ್ ಕಂಪೆನಿಯಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಖಾತೆಗಳಿಗೆ ಒಟ್ಟು 30,32,000 ರೂ. ಹೂಡಿಕೆ ಮಾಡಿದ್ದಾರೆ. ಆದರೆ ಆರೋಪಿಗಳು ಹಣ ಅಥವಾ ಲಾಭಾಂಶ ನೀಡದೆ ವಂಚಿಸಿದ್ದಾರೆ ಎಂದು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.