![]() |
| ಇತ್ತೀಚೆಗೆ ನಡೆದ ಅಪಘಾತ |
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಲ್ಲಿ 1,840 ಅಪಘಾತಗಳು ಸಂಭವಿಸಿವೆ. 2024ರಲ್ಲಿ 237 ಮಂದಿ ಮೃತಪಟ್ಟು 1,439 ಮಂದಿ ಗಾಯಗೊಂಡಿದ್ದಾರೆ. 2025 ರಲ್ಲಿ 263 ಮಂದಿ ಮೃತಪಟ್ಟು, 1,255 ಮಂದಿ ಗಾಯಗೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸದನಕ್ಕೆ ಮಾಹಿತಿ ನೀಡಿದ್ದಾರೆ. 2024ರಲ್ಲಿ 203, 2025ರಲ್ಲಿ 190 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅವರು ಅಧಿವೇಶನದಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಅಪಘಾತ ಮತ್ತು ಸೈಬರ್ ಕ್ರೈಂ ಅಪರಾಧಗಳ ಕುರಿತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಉಡುಪಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷಾ ಸಮಿತಿಯಲ್ಲಿ ಜಿಲ್ಲೆಯ ಒಳಗೆ ಸಂಚರಿಸುವ ಸರಕು ಸಾಗಿಸುವ ಲಾರಿ ಹಾಗೂ ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಿಸುವ ಲಾರಿಗಳಿಗೆ ವೇಗ ನಿಯಂತ್ರಕಗಳನ್ನು ಅಳವಡಿಸಲು ಆದೇಶಿಸಲಾಗಿದೆ. ಪತ್ತೆ ಹಚ್ಚಲಾಗದ ಸೈಬರ್ ಕ್ರೈಂ ಪ್ರಕರಣಗಳನ್ನು ಪತ್ತೆ ಮಾಡಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
