ಉಡುಪಿ:ಜಿಲ್ಲಾಧಿಕಾರಿಯ ನಕಲಿ ವಾಟ್ಸಾಪ್ ,ಫೇಸ್ ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ

ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಹಾಗೂ ವಾಟ್ಸಾಪ್ ನಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರ ಹೆಸರಿನ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವರದಿಯಾಗಿದೆ.

ನಕಲಿ ಖಾತೆ ತೆರೆದು ಬೇರೆ ಬೇರೆ ಕಾರಣಗಳಿಗಾಗಿ ಹಣ ನೀಡುವಂತೆ ಸಂದೇಶ ಕಳುಹಿಸಲಾಗಿದೆ. ಈ ಬಗ್ಗೆ ಈಗಾಗಲೇ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರೂ ಕೂಡ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಯಾರೂ ಕೂಡ ಹಣ ನೀಡಬಾರದು. ಇಂತಹ ಸಂದೇಶಗಳಿಗೆ ಸ್ಪಂದಿಸದಿರುವಂತೆ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.