![]() |
| ಪ್ರತಿಭಟನೆ |
ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹೆಸರು ಮತ್ತು ಅದರಲ್ಲಿದ್ದ ಜನಪರ ಅಂಶಗಳನ್ನು ಬದಲಾಯಿಸಿದ್ದನ್ನು ವಿರೋಧಿಸಿ ಉಡುಪಿಯಲ್ಲಿ ಪ್ರತಿಭಟನೆ ಆಯೋಜಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಮಾತನಾಡಿ, ಹಿಂದಿನ ಉದ್ಯೋಗ ಖಾತರಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಪ್ರಸ್ತುತ ಜನವಿರೋಧಿ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರದ ಈ ರೀತಿಯ ಹುನ್ನಾರವನ್ನು ಜನಸಾಮಾನ್ಯರು ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷವು ಬಡವರ ಪರವಿರುವ ಪಕ್ಷ. ಜನಸಾಮಾನ್ಯರಿಗೆ ನೆಮ್ಮದಿಯ ಬದುಕನ್ನು ಕಲ್ಪಿಸುವುದಕ್ಕಾಗಿ ಇಂತಹ ಜನಪರ ಯೋಜನೆಯನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು ಎಂದು ತಿಳಿಸಿ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.
