ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.ಎಸಿ ಮಾಡಿರುವ ಆದೇಶ ಸರಿಯಿಲ್ಲ, ಪರಿಶೀಲಿಸಿ ಆದೇಶಿಸುವಂತೆ ತಿಳಿಸಿದೆ.

ಪುತ್ತೂರು ಉಪ ವಿಭಾಗಾಧಿಕಾರಿ 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು.