![]() |
| ಸುಧಾಕರ |
ಉಡುಪಿ: ಫೇಸ್ ಬುಕ್ ನಲ್ಲಿ ಪರ್ಯಾಯ ಉತ್ಸವಕ್ಕೆ ಜಿಲ್ಲಾ ಮುಸ್ಲಿಂ ಸ್ನೇಹ ಸಮಿತಿಯು ನೀಡಲಿರುವ ಸಹಕಾರದ ಕುರಿತು ಧರ್ಮ - ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹ ಬರೆದಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ Sudhakar Appu Nitte “ ಎಂಬ ಫೇಸ್ ಬುಕ್ ಖಾತೆಯಲ್ಲಿ “ ಹಿಂದೂ ಮುಸ್ಲಿಂ ಸೌಹಾರ್ದತೆಯಿಂದ ಇರಬೇಕಾದರೆ ಈ ಸೌಹಾರ್ದ ಸಮಿತಿಯವರಿಗೆ ಎಷ್ಟೋ ಕಾರ್ಯಗಳಿವೆ. ಅದನ್ನ ಬಿಟ್ಟು ಹಿಂದುಗಳ ಪರ್ಯಾಯ ಮೆರವಣಿಗೆಯಲ್ಲಿ "ಧಫ್ ದುಫ್ ಡಮ್ "ಅಂತ ಕಾರ್ಯಕ್ರಮ ಮಾಡುವ ಅಗತ್ಯವಿಲ್ಲ. ಪರ್ಯಾಯದಲ್ಲಿ ಶರಬತ್, ನೀರಿನ ಬಾಟಲಿ ಹಂಚಿದ ಕೂಡಲೇ ಸೌಹಾರ್ದ ಬೆಳೆಯಲ್ಲ, ಇದರಿಂದ ಹಿಂದುಗಳಿಗೆ ನಂಬಿಕೆ ಏನು ನಿಮ್ಮ ಮೇಲೆ ಹೆಚ್ಚಲ್ಲ . ಬಾಕಿದ್ದನ್ನು ಹೇಳಬೇಕಾದವರು ಹೇಳಿದ್ದಾರೆ” ಎಂದು ಬರೆಯಲಾಗಿತ್ತು. ಇದು ಧರ್ಮ -ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ಪೊಸ್ಟ್ ಎಂಬ ಕಾರಣಕ್ಕೆ ಅಪರಾಧ ಕ್ರಮಾಂಕ 01/2026 ಕಲಂ 196(1), 353(2), 352 ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದೆ.ಈ ಸಂಬಂಧ ಆರೋಪಿ ಸುಧಾಕರ (37 ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
