ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ !



ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಗಾಯಗಳು ಅಥವಾ ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ.

ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅಪಘಾತಕ್ಕೆ ಕಾರಣ, ಹಾನಿಯ ಪ್ರಮಾಣ ಮತ್ತು ಎನ್‌ಸಿಪಿ ಮುಖ್ಯಸ್ಥರ ಸ್ಥಿತಿ ಕುರಿತು ಇನ್ನೂ ತಿಳಿದುಬಂದಿಲ್ಲ.ಬೆಂಕಿ ಹೊತ್ತಿಕೊಂಡಿರುವ ದೃಶ್ಯಗಳು ಲಭ್ಯವಾಗಿದ್ದು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.ಇದೀಗ ಬಂದ ಮಾಹಿತಿ ಪ್ರಕಾರ ಅಜಿತ್ ಪವಾರ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.