ಕಾಪು: ಖಾಸಗಿ ಬಸ್- ಸ್ಕೂಟರ್ ನಡುವೆ ಭೀಕರ ಅಪಘಾತ- ಸವಾರ ಸಾವು



ಕಾಪು: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಪಡುಕೆರೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ.

ಪಾಂಗಾಳ ಸಮೀಪ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸ್ಕೂಟರ್ ನಲ್ಲಿ ಆಗಮಿಸುತ್ತಿದ್ದ ಕೃಷ್ಣ ಅವರ ಸ್ಕೂಟರ್ ಗೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದೆ‌. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸವಾರ ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.