ನಿಟ್ಟೆ: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಶಿಕ್ಷಣ ತಜ್ಞ ಎನ್. ವಿನಯ್ ಹೆಗ್ಡೆ (86) ನಿಧನ

ವಿನಯ್ ಹೆಗ್ಡೆ

ನಿಟ್ಟೆ: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಶಿಕ್ಷಣ ತಜ್ಞ, ಕೆ. ಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ (86) ಅವರು ಇಂದು ಜನವರಿ 1ರ ಮುಂಜಾನೆ ನಿಧನ ಹೊಂದಿದರು.

ವಿನಯ್ ಹೆಗ್ಡೆ ಅವರ ನಿಧನಕ್ಕೆ ಗಣ್ಯರು, ಶಿಕ್ಷಣ ಪ್ರೇಮಿಗಳು ಹಾಗೂ ಕಾರ್ಕಳದ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಸ್ . ಹೆಗ್ಡೆ ಅವರ ದ್ವಿತೀಯ ಪುತ್ರರಾದ ವಿನಯ್ ಹೆಗ್ಡೆ ಅವರು ಕರಾವಳಿ ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದರು.

ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಶಿಕ್ಷಣ ಮಾತ್ರವಲ್ಲದೆ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದವರು. ಧಾರ್ಮಿಕ, ಸಾಮಾಜಿಕ ಸೇವೆ ಮೂಲಕವೂ ಅಪಾರ ಖ್ಯಾತಿ ಗಳಿಸಿದ್ದರು.