ಉಡುಪಿ: ಫೆಬ್ರವರಿ 25 ರಂದು ಸಿದ್ದರಾಮಯ್ಯ ಕಾರ್ಕಳಕ್ಕೆ - ನೂತನ ಅಂಬೇಡ್ಕರ್ ಭವನ ಉದ್ಘಾಟನೆ



ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕಿನ ಕಾಬೆಟ್ಟುನಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆ.25ರ ಬೆಳಗ್ಗೆ 11:30ಕ್ಕೆ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆ‌ರ್. ಹೆಬ್ಬಾಳ್ಳ‌ರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಉಪಸ್ಥಿತರಿರಲಿದ್ದು, ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾ‌ರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಶಾಸಕರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂ‌ರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮತ್ತಿತರರು ಭಾಗಹಿವಸಲಿದ್ದಾರೆ.ಈ ಸಂಬಂಧ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಸಿದ್ಧತೆಗಳ ಪರಿಶೀಲನೆ ನಡೆಸಿದರು.