ಉಡುಪಿ: ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿ, ರೂ. 4,90,920 ನಗದು ಸೇರಿದಂತೆ ವಾಹನಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತರನ್ನು ನಿತಿನ್ ರಾಜ್ (35), ಸಚಿನ್ ಆರ್ ಶೆಟ್ಟಿ (35), ಸತೀಶ್ @ ಕಿಶೋರ್ (38), ರಂಜಿತ್ ಕೆ ಅಮೀನ್ (39) ಹಾಗೂ ರವಿ (36) ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿದ್ದ ಜೂಜಾಟಕ್ಕೆ ಬಳಸಿದ 52 ಇಸ್ಪೀಟ್ ಎಲೆಗಳು, ರೂ. 4,90,920 ನಗದು, ನಾಲ್ಕು ಮೊಬೈಲ್ ಫೋನ್‌ಗಳು, ಒಂದು ಪವರ್ ಬ್ಯಾಂಕ್, ಜೊತೆಗೆ ಟೊಯೋಟಾ ಫಾರ್ಚುನರ್ ಕಾರು ಮತ್ತು ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಮಲ್ಪೆ ಠಾಣೆಯಲ್ಲಿ ಅಪರಾಧ ಕ್ರಮಾಂಕ 17/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 112 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87ರಂತೆ ಪ್ರಕರಣ ದಾಖಲಾಗಿದೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
