ಉಡುಪಿ:ಅಪಘಾತ ಹೆಚ್ಚು ನಡೆಯುವ 6 ಬ್ಲ್ಯಾಕ್ ಸ್ಪಾಟ್ ಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ - ಎಸ್ಪಿ ಹರಿರಾಂ ಶಂಕರ್ ಮಾಹಿತಿ



ಉಡುಪಿ : ಜಿಲ್ಲೆಯಲ್ಲಿ ಅಪಘಾತ ಹೆಚ್ಚು ಸಂಭವಿಸುತ್ತಿರುವ ಬ್ಲ್ಯಾಕ್ ಸ್ಪಾಟ್ ಎಂದು ಗುರುತಿಸಿರುವ 6 ಕಡೆಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ನಗರದ ಕಲ್ಸಂಕ ಮತ್ತು ಮಣಿಪಾಲದಲ್ಲಿ ಈಗಾಗಲೇ ಸಿಗ್ನಲ್ ಅಳವಡಿಸಲಾಗಿದೆ. ಅದೇ ಮಾದರಿಯಲ್ಲಿ ಪಡುಬಿದ್ರಿ , ಬಲಾಯಿಪಾದೆ ,ಅಂಬಾಗಿಲು ,ಆಕಾಶವಾಣಿ ಜಂಕ್ಷನ್ , ಕೋಟ ಮೂರು ಕೈ ಮತ್ತು ಕುಂದಾಪುರ ಸಂಗಮ್ ಸರ್ಕಲ್ ಬಳಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ನಡೆಯುತ್ತಿದೆ.ಈ ಆರು ಕಡೆಗಳಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುತ್ತವೆ.ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿ ,ಜನಪ್ರತಿನಿಧಿಗಳು ಮತ್ತು ಎಲ್ಲ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿ ಅವರ ಸಲಹೆಗಳನ್ನು ಪಡೆದು ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.