ಮಾ.18 ರಿಂದ ಏ.2ರವರೆಗೆ ಎಸ್ಸೆಸ್ಸೆಲ್ಸಿ ಹಾಗೂ ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ



ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾ.18 ರಿಂದ ಏ.2ರವರೆಗೆ ಎಸ್ಸೆಸ್ಸೆಲ್ಸಿ ಹಾಗೂ ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಾರದರ್ಶಕ ಹಾಗೂ ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. 15,941 ಪರೀಕ್ಷಾ ಕೇಂದ್ರಗಳಲ್ಲಿ ಪುನರಾವರ್ತಿತ, ಖಾಸಗಿ ಆಭ್ಯರ್ಥಿಗಳು ಒಳಗೊಂಡಂತೆ ಒಟ್ಟು 9,02,889 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಸುಗಮವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ), ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪೊಲೀಸರೊಂದಿಗೆ ಸಭೆ ನಡೆಸಿ ಅಂತಿಮ ತಯಾರಿ ಮಾಡಿಕೊಳ್ಳಲಾಗಿದೆ. ಎಲ್ಲಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಇರಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಹಿತಿ ಹಬ್ಬಿಸಿ ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಬಸ್​ಗಳಲ್ಲಿ ಪ್ರಯಾಣಿಸಬಹುದಾಗಿದೆ. ಉತ್ತಮ ಫಲಿತಾಂಶ ವೃದ್ಧಿಗಾಗಿ ಕಾರ್ಯಾಗಾರ ನಡೆಸಲಿದೆ. ಈ ಮೂಲಕ ಪರೀಕ್ಷಾ ಭಯ ಹೋಗಲಾಡಿಸಿ ಧೈರ್ಯದಿಂದ ಪರೀಕ್ಷೆ ಎದುರಿಸುವಂತೆ ಮಾನಸಿಕ ಸಜ್ಜುಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

ದ್ವಿತೀಯು ಪಿಯುಸಿ ಪರೀಕ್ಷೆ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. 5,174 ಪರೀಕ್ಷಾ ಕೇಂದ್ರಗಳಲ್ಲಿ 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏ.25ರಿಂದ ಮೇ 9ರವರೆಗೆ ಪರೀಕ್ಷೆ-2 ನಡೆಯಲಿದೆ. ಅದೇ ರೀತಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಮೇ 18ರಿಂದ 25ರವರೆಗೆ ನಡೆಯಲಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ ಮೊದಲ ವಾರದಲ್ಲಿ ಅಂತಿಮ ಪ್ರವೇಶ ಪತ್ರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

SSLC ಪರೀಕ್ಷೆ ವೇಳಾಪಟ್ಟಿ


ಮಾ.18: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್​, ಸಂಸ್ಕೃತಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತಮಾ.25: ದ್ವೀತಿಯ ಭಾಷೆ (ಇಂಗ್ಲಿಷ್​ , ಕನ್ನಡ)ಮಾ.18: ಗಣಿತ, ಸಮಾಜಶಾಸ್ತ್ರಮಾ.30: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್​ , ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ) ಹಾಗೂ ಎನ್ಎಸ್​ಕ್ಯೂಎಫ್ ವಿಷಯಗಳುಏ.1: ಜಿಟಿಎಸ್ ವಿಷಯಗಳು (ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ ಏ.2: ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಫೆ.28: ಕನ್ನಡ, ಅರೇಬಿಕ್ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರಮಾ.3: ಇಂಗ್ಲಿಷ್​ಮಾ.4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ಮಾ.5: ಇತಿಹಾಸಮಾ.6: ಭೌತಶಾಸ್ತ್ರಮಾ.7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ ಭೂಗರ್ಭಶಾಸ್ತ್ರಮಾ.9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ,ಮಾ.10: ಅರ್ಥಶಾಸ್ತ್ರಮಾ.11: ತರ್ಕಶಾಸ್ತ್ರ, ವಿದ್ಮುನ್ಮಾನಶಾಸ್ತ್ರ, ಗೃಹವಿಜ್ಞಾನಮಾ.12: ಹಿಂದಿಮಾ.13: ರಾಜ್ಯಶಾಸ್ತ್ರಮಾ.14: ಲೆಕ್ಕಶಾಸ್ತ್ರ, ಗಣಿತಮಾ.16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾ.17: ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟಿಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್​​ ವೆಲ್​ನೆಸ್