ಉಡುಪಿ: ಉಡುಪಿ ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಇಂದು ಚಾಲನೆ ನೀಡಿದರು.
ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿ ನಗರದ ವಾಹನ ದಟ್ಟಣೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಫ್ರೀ ಲೆಫ್ಟ್ ಕಾಮಗಾರಿಗೆ ನಗರಸಭೆಯ ಮೂಲಕ 49 ಲಕ್ಷ ವೆಚ್ಚದಲ್ಲಿ ಅನುದಾನ ಒದಗಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡ ಬಳಿಕ ಕಲ್ಸಂಕ ಜಂಕ್ಷನ್ ನಿಂದ ಅಂಬಾಗಿಲು ಕಡೆಗೆ ಸಾಗುವ ವಾಹನಗಳಿಗೆ ಸುಗಮ ಸಂಚಾರ ಸಾಧ್ಯವಾಗಲಿದ್ದು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಟಿ. ಜಿ. ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
