ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಕ್ರೈನ್



ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ಸಂಭವಿಸಿದೆ. 

ವ್ಯಕ್ತಿಯು ಕ್ರೈನ್ ನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. 

ಎದುರಿನಲ್ಲಿ ಬರುತ್ತಿದ್ದ ಕಾರಿಗೆ ಸೈಡ್ ಕೊಡುವ ಭರದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಕ್ರೈನ್ ಹರಿಸಿದ್ದಾನೆ. ಬಳಿಕ ಕ್ರೈನ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.