ಶಿರ್ವ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮ !



ಶಿರ್ವ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ವೊಂದು ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಶಿರ್ವ ಸಮೀಪದ ಪಂಜಿಮಾರು ಪಾಲಮೆಯಲ್ಲಿ  ಸಂಭವಿಸಿದೆ.

ಪಾಲಮೆಯ ನಿವಾಸಿಯೊಬ್ಬರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಮಂಗಳೂರಿನಲ್ಲಿ ಹೊಸ ಹೋಂಡಾ ಡಿಯೋ (Dio) ಸ್ಕೂಟರ್ ಖರೀದಿಸಿದ್ದರು.ಇವರು ಸ್ಕೂಟರ್ ಅನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿದ್ದಾಗ, ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಸ್ಕೂಟರ್ ಸುಟ್ಟು ಕರಕಲಾಗಿದೆ.

ಶಿರ್ವ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.