ಉಡುಪಿ: ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರವು ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MANREGA) ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂತೆಗೆದ ಜನವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಪತ್ರಿಭಟನಕಾರರು. ಕೇಂದ್ರದ ವಿರುದ್ದ ಘೋಷಣೆಗಳನ್ನು ಕೂಗಿದರು.ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕೆ.ಪಿ ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮರ್ ಸೊರಕೆ, ಬಡವರ ಪರವಾದ ಯೋಜನೆಗಳನ್ನು ಕೇಂದ್ರ ಸರಕಾರ ಬದಲಾವಣೆ ಮಾಡುವ ಮೂಲಕ ಬಡವರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ನರೇಗಾ ಯೋಜನೆ ಉಳಿಸಲು ರೈತರ ಚಳವಳಿ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಜಯಪ್ರಕಾಶ್ ಹೆಗ್ದೆ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ. ಎ ಗಫೂರ್ , ಮುಖಂಡರುಗಳಾದ ಉದಯ್ ಕುಮರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ದೆ ಮೊಳಹಳ್ಳಿ, ಕಾರ್ಯಧ್ಯಕ್ಷರಾದ ಕಿಶನ್ ಹೆಗ್ದೆ ಕೋಲ್ಕೆಬೈಲ್ ಮೊದಲಾದವರು ಉಪಸ್ಥಿತರಿದ್ದರು.
