ನಾಗಸಾಧುಗಳು ಗೋಧಾಮಕ್ಕೆ ಆಗಮಿಸಿ ನಾಗಮಂಡಲ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲೆಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಸಂಜೀವಿನಿ ಗೋಧಾಮದ ಸವಿತಾ ಆರ್. ಆಚಾರ್, ರಕ್ಷತ್ ಆರ್. ಆಚಾರ್, ಶ್ರೀಮನ್ನಾಗಮಂಡಲ ಸೇವಾ ಸಮಿತಿಯ ಪದಾಧಿಕಾರಿಗಳು, ಉಪಸಮಿತಿಯ ಪ್ರಮುಖರು ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಮೂರು ದಿನಗಳ ಕಾಲ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಪೂಜಾ ವಿಧಿಗಳು ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.ಈ ಸಂಬಂಧ ಭರದ ತಯಾರಿಗಳು ನಡೆಯುತ್ತಿವೆ.
