ಮಣಿಪಾಲ:ಕರ್ಕಶ ಸೈಲೆನ್ಸರ್‌ಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ - ಬುಲ್ಡೋಜರ್ ಮೂಲಕ ನಾಶ



ಮಣಿಪಾಲ: ಜೋರಾದ ಶಬ್ದವನ್ನು ಉಂಟುಮಾಡುವ ಬೈಕ್‌ಗಳಲ್ಲಿ ಅಳವಡಿಸಲಾಗಿದ್ದ ಡಿಫೆಕ್ಟಿವ್ ಸೈಲೆನ್ಸರ್‌ಗಳ ವಿರುದ್ಧ ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ವಿಶೇಷ ತಪಾಸಣೆ ನಡೆಸಲಾಗುತ್ತಿದ್ದು, ಈ ಅವಧಿಯಲ್ಲಿ ಒಟ್ಟು 120 ಡಿಫೆಕ್ಟಿವ್ ಸೈಲೆನ್ಸರ್‌ಗಳನ್ನು ಪತ್ತೆಹಚ್ಚಲಾಗಿದೆ.

ಈ ಸಂಬಂಧ 120 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಒಟ್ಟು 1,05,000 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ವಶಪಡಿಸಿಕೊಳ್ಳಲಾದ ಎಲ್ಲಾ 120 ಡಿಫೆಕ್ಟಿವ್ ಸೈಲೆನ್ಸರ್‌ಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರ ಸಮಕ್ಷಮದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬುಲ್ಡೋಜರ್ ಬಳಸಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್  ಮಹೇಶ್ ಪ್ರಸಾದ್ ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.