ಮೃತ ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ನೈಲಾನ್ ಹಗ್ಗದ ಸಹಾಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ರುಂಡ ಬೇರ್ಪಟ್ಟ ಪರಿಣಾಮ ಬಾವಿಯ ನೀರು ಕೆಂಪು ಬಣ್ಣಕ್ಕೆ ತಿರುಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅವರು ಅರ್ಚಕ ವಾಸುದೇವ ನಾಯಕ್ ಅವರ ದ್ವಿತೀಯ ಪುತ್ರರಾಗಿದ್ದಾರೆ. ಮೃತರು ಮಣಿಪಾಲದ ವ್ಯಾಲಿವ್ಯೂ ಹೊಟೇಲಿನಲ್ಲಿ ಎಲೆಕ್ಟ್ರಿಶಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನಿವೃತ್ತಿ ಹಂತದಲ್ಲಿದ್ದರು.
ಪುರುಷೋತ್ತಮ ನಾಯಕ್ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದು, ಕಕ್ಕುಂಜೆಯ ಕಟ್ಟೆ ಮಹಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ನಾಯಕ್ ಕುಟುಂಬವು ಸ್ಥಳೀಯವಾಗಿ ಉತ್ತಮ ಖ್ಯಾತಿ ಪಡೆದಿತ್ತು.
ಆರ್ಥಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಳಿಕ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
