ಉಡುಪಿ: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ !

ಆರಿಫ್

ಉಡುಪಿ: ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರಿಫ್ ಬಂಧಿತ ಆರೋಪಿ. ಈತ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಸುರೇಶ್ ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ವಿಶ್ವನಾಥ್ ಅವರು ಸೋಮವಾರ ಉಪ್ಪಿನಂಗಡಿಯ ಕೊಯ್ಲ ಪ್ರದೇಶದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಮಾರ್ಚ್ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.