ಹೋಳಿ ಆಚರಣೆ : ಮಾರ್ಚ್ 5 ರಂದು ಗಂಗೊಳ್ಳಿ, ಕುಂದಾಪುರದ ಕೆಲವೆಡೆ ಮದ್ಯ ಮಾರಾಟ ನಿಷೇಧ


ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯಲ್ಲಿ ಹೋಳಿ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ  ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ, ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮ ವ್ಯಾಪ್ತಿಯಲ್ಲಿ ಹಾಗೂ ಕುಂದಾಪುರ ನಗರ ಠಾಣೆಯ ಕಸಬಾ, ವಡೇರಹೋಬಳಿ ಹಾಗೂ ಹಂಗಳೂರು ಗ್ರಾಮ ವ್ಯಾಪ್ತಿಯಲ್ಲಿ ಮಾರ್ಚ್ 5 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮುಚ್ಚಲು ಆದೇಶಿಸಿದೆ.ಅಂದು ಒಣದಿನ (Dry Day) ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶ ನೀಡಿದ್ದಾರೆ.