ಉಡುಪಿ: ಡ್ರಗ್ಸ್ ನಿರ್ಮೂಲನೆಗಾಗಿ ಮಾದಕ ವಸ್ತು ಸೇವನೆಯ ವಿರುದ್ಧ ಸಾರ್ವಜನಿಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಪಿಎಸ್ಐ ನಾಸಿರ್ ಹುಸೇನ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ಭಾನುವಾರ ಸಂಭವಿಸಿದೆ.
ನಾಸೀರ್ ಹುಸೇನ್ , ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಅಮಾಸೆಬೈಲು, ಕುಂದಾಪುರ, ಬೈಂದೂರು, ಕೊಲ್ಲೂರು, ಶಂಕರನಾರಾಯಣದಲ್ಲಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಗ್ರಾಮಾಂತರ (ಕಂಡ್ಲೂರು) ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಭಾರತೀಯ ಸೇನೆಯಿಂದ ಪೊಲೀಸ್ ವೃತ್ತಿಗೆ ಸೇರ್ಪಡೆಗೊಂಡಿದ್ದ ನಾಸಿರ್ ಹುಸೇನ್ ಜನಸ್ನೇಹಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಠಾಣೆಗಳಲ್ಲೆಲ್ಲಾ ಜನ ಮೆಚ್ಚುಗೆ ಗಳಿಸಿದ್ದರು.
ಮೃತದೇಹ ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿದ್ದು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ.
