ಖಮೇನಿ ಹತ್ಯೆ: 6 ದಿನಗಳ ಬಳಿ ಸಂತಾಪ ವ್ಯಕ್ತಪಡಿಸಿದ ಭಾರತ



ನವದೆಹಲಿ: ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ಖಮೇನಿ ಹತ್ಯೆ ಬಗ್ಗೆ ಮೌನವಹಿಸಿದ್ದ ಪ್ರಧಾನಿ ಮೋದಿ ವಿರುದ್ಧ ವಿಪಕ್ಷಗಳಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸಂತಾಪ ಸೂಚಿಸಿದೆ.

ಕೇಂದ್ರ ಸರ್ಕಾರದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಹಾಕಿದ್ದು, ಹತ್ಯೆಗೀಡಾದ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೆ ಸಂತಾಪ ಸೂಚಿಸಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್‌ ಶನಿವಾರ ಮುಂಜಾನೆ ನಡೆಸಿದ್ದ ವಾಯುದಾಳಿಯಲ್ಲಿ ಖಮೇನಿ ಹತರಾಗಿದ್ದರು. ಇನ್ನೊಂದೆಡೆ, ತನ್ನ ನಾಯಕ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‌ ಗುಡುಗಿದೆ.