ಕುಂದಾಪುರ:10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

ಶಶಿಕಾಂತ್ ಶೆಟ್ಟಿ

ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ LPC ನಂ-3/2024 / ಸಿ.ಸಿ. ನಂ-2688/2015 ಪ್ರಕರಣದಲ್ಲಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಶಿಕಾಂತ್ ಶೆಟ್ಟಿ (44) ಬಂಧಿತ ಆರೋಪಿ.

ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಪಶ್ಚಿಮ ಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆಯ ಬನಿನಾಥಪುರದಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.

ಬಂಧಿತನನ್ನು  ಕುಂದಾಪುರದ ಎ.ಸಿ.ಜೆ. ಮತ್ತು ಜೆ.ಎಂ.ಎಫ್‌.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಸ್ತುತ ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.