ಉಡುಪಿ:15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ಬಲೆಗೆ



ಉಡುಪಿ: ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಅಪರಾಧ ಕ್ರಮಾಂಕ 165/2011 (ಕಲಂ 420, 408, 109, 511, R/W 34 IPC) ಹಾಗೂ 124/2011 (ಕಲಂ 379 IPC) ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಜುಬೇರ್ (42) ಬಂಧಿತ ಆರೋಪಿ.ಈತ ಕೊಂಡಿಬೇಂಗ್ರೆ ಪಡುತೋನ್ಸೆ ನಿವಾಸಿಯಾಗಿದ್ದು, ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ.

ಆತನ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಮತ್ತು ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನೀಲ್ ಕುಮಾರ್ ಡಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಬೆಂಗಳೂರಿನ ಶಿವಾಜಿನಗರದಲ್ಲಿ ಆರೋಪಿ ಜುಬೇರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.