ಉಡುಪಿ: ಎಸೆಸೆಲ್ಸಿ ಪರೀಕ್ಷೆ ಪ್ರಾರಂಭ : ವಿದ್ಯಾರ್ಥಿಗಳಿಗೆ ಹೂ ಪೆನ್ನು ಕೊಟ್ಟು ಶುಭ ಹಾರೈಸಿದ ಕರವೇ ಮಹಿಳಾ ಘಟಕ



ಉಡುಪಿ: ಇಂದಿನಿಂದ ರಾಜ್ಯಾದ್ಯಂತ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಆರಂಭವಾಗಿದೆ.  ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ಗುಲಾಬಿ ಹೂ ಮತ್ತು ಪೆನ್ ಕೊಟ್ಟು ಧೈರ್ಯ ತುಂಬುವ ಕಾರ್ಯಕ್ರಮವನ್ನು ಉಡುಪಿ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಯಿತು. 

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ "ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಥಿ ಜೀವನದಲ್ಲಿ 10 ನೇ ತರಗತಿಯ ಪರೀಕ್ಷೆಯ ಕಾಲಘಟ್ಟ ಬಹಳ ಮಹತ್ವದ್ದು. ಅದು ಮನುಷ್ಯ ತನ್ನ ಜೀವನ ರೂಪಿಸಿಕೊಳ್ಳಲು ಮಹತ್ವದ ಪಾತ್ರ ವಹಿಸುತ್ತವೆ. ಹಾಗಾಗಿ ಈ ದಿನ ಪರೀಕ್ಷೆಯಲ್ಲಿ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಲಾಬಿ ಹೂ ಮತ್ತು ಪೆನ್ ನೀಡಿ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ನಿಮಗೆಲ್ಲರಿಗೂ ಶುಭವಾಗಲಿ ಎಂದು ಹಾರೈಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಶೇರಿಗಾರ್ತಿ, ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಅಫೋನ್ಸೊ ಮೆನೆಜಸ್,ಹಾಗೂ ಸಂಘಟನೆಯ ಪ್ರಮುಖರಾದ ನಾಗರಾಜ,  ವಿಠಲ, ಸಂತೋಷ, ಪಾಂಡು, ಸಿದ್ದು ರವರು ಉಪಸ್ಥಿತರಿದ್ದರು.