ಉಡುಪಿ: ಭಾರತದ ಇತಿಹಾಸದಲ್ಲಿ ಅಚ್ಚಳಿಯದಂತಹ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುದೀರ್ಘ ಕಾಲ ಸರ್ಕಾರಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಮಂತ್ರಿಯಾಗಿ ಒಟ್ಟು 8,931 ದಿನಗಳಿಗೂ ಹೆಚ್ಚು ಕಾಲ ಅಧಿಕಾರ ಪೂರೈಸಿರುವ ಅವರ ಈ ಸಾಧನೆಯು, ದಶಕಗಳ ಕಾಲದ ಅವರ ಅಚಲ ಸಾರ್ವಜನಿಕ ಸೇವೆಯನ್ನು ಪ್ರತಿಬಿಂಬಿಸುತ್ತದೆ.
ಸುಧೀರ್ಘವಾದ ಈ ಸಾಧನೆ ಅವರ ಮೇಲಿರುವ ಜನರ ಅಗಾಧ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಗುಜರಾತ್‌ನ ಸುದೀರ್ಘ ಅವಧಿಯ ಮುಖ್ಯಮಂತ್ರಿ, ಅತಿ ಹೆಚ್ಚು ಸಿಎಂ ಅನುಭವ ಹೊಂದಿರುವ ಪ್ರಧಾನಿ, ಸ್ವಾತಂತ್ರ್ಯ ನಂತರ ಜನಿಸಿದ ಮೊದಲ ಪ್ರಧಾನಿ ಹಾಗೂ 2014, 2019 ಮತ್ತು 2024ರಲ್ಲಿ ಸತತ ಮೂರು ಬಾರಿ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಜಗತ್ತಿನೆದುರು ಭಾರತವನ್ನು ಜಗದ್ಗುರು ಸ್ಥಾನದಲ್ಲಿ ನಿಲ್ಲಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭ ಹಾರೈಕೆಗಳು. ಮತ್ತಷ್ಟು ಸೇವೆ ಸಲ್ಲಿಸುವ ಶಕ್ತಿ ಅವರಿಗೆ ಒದಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಕೋಟ ಶುಭಹಾರೈಸಿದ್ದಾರೆ.
