ಬೈಂದೂರು: ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಅರೆಸ್ಟ್ - ಕಳ್ಳತನ ಪ್ರಕರಣದಲ್ಲೂ ಆರೋಪಿ ಭಾಗಿ !



ಬೈಂದೂರು:  ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ  ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪೌಜಾನ್ ಅಹ್ಮದ್ ಬಂಧಿತ ಆರೋಪಿ. 

ಪಾತಿಮಾ ಅವರು ಮಲಗಿದ್ದ ವೇಳೆ, ಮನೆಯ ಹಿಂಬಾಗಿಲನ್ನು ಒಡೆದು ಒಳನುಗ್ಗಿ, ಮನೆಯಲ್ಲಿದ್ದ ಗೋಡ್ರೇಜ್ ಅಲಮಾರಿಯನ್ನು ತೆರೆದು ಹುಡುಕಾಡುತ್ತಿದ್ದನು. ಈ ವೇಳೆ ಪಾತಿಮಾ ಅವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ, ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ.

ಈ ಕುರಿತು ಪಾತಿಮಾ ಅವರು ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2026 ಅಡಿಯಲ್ಲಿ ಕಲಂ 331(4), 305, 62 BNS ಅನ್ವಯ ಪ್ರಕರಣ ದಾಖಲಾಗಿದೆ.

ಇದೇ ವೇಳೆ, ಆರೋಪಿಯು ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸ್ಕೂಟರ್ ನಲ್ಲಿ  ಭಯಾನಕ ರೀತಿಯಲ್ಲಿ ವ್ಹೀಲಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದ.ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ  ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2026 ಅಡಿಯಲ್ಲಿ ಕಲಂ 281, 125 BNS ಹಾಗೂ 184, 129 R/W 194D IMV Act ಅನ್ವಯ ಪ್ರಕರಣ ದಾಖಲಾಗಿದೆ.